ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್
ದಿಟ್ಟ, ಧೀಮಂತ ದೊರೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಬಹುಜನರ ಬಂಧು.ಅವರ ಸೇವೆ ಮಾದರಿಯಾದುದು. ನವ ಮೈಸೂರಿನ ನಿರ್ಮಾತೃ ಮೀಸಲಾತಿಯ ಜನಕ ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು. ರಾಜಕುಮಾರನಿಗೆ ಸೂಕ್ತ ವಿದ್ಯಾಭ್ಯಾಸ, ಆಡಳಿತ ತರಬೇತಿ ಇವುಗಳನ್ನು ಮಹಾರಾಣಿಯವರು ತೀವ್ರ ನಿಗಾ ವಹಿಸಿ ನಡೆಸಿದುದರ ಪರಿಣಾಮವಾಗಿ, ಮೈಸೂರು ರಾಜ್ಯಕ್ಕೆ ಒಬ್ಬ ಸಮರ್ಥ ಆಡಳಿತಗಾರರಾಗಿ ನಾಲ್ವಡಿ ಕೃಷ್ಣರಾಜ ಒಡೆಯರು ದೊರಕಿದರು. #ಮಾದರಿ_ಮೈಸೂರು ೧೯೦೨ರ ಆಗಸ್ಟ್ ೮ನೇ ತಾರೀಖಿನಿಂದ ಮೈಸೂರು ರಾಜ್ಯದ ನೇರ ಉಸ್ತುವಾರಿ ಕೃಷ್ಣರಾಜ ಒಡೆಯರ ಸುಪರ್ದಿಗೆ ಬಂದಿತು. ಆಗ ದಿವಾನರಾಗಿದ್ದ ಸರ್. ಕೆ. ಶೇಷಾದ್ರಿ ಐಯ್ಯರ್ ರವರ ಸಹಕಾರದೊಡನೆ ಮೈಸೂರು ರಾಜ್ಯದ ಸರ್ವತೋಮಖ ಅಭಿವೃದ್ದಿಗೆ ನಾಲ್ವಡಿ ಕೃಷ್ಣರಾಜ ಒಡೆಯರು ಕಂಕಣ ಬದ್ದರಾದರು. ಇವರ ಕಾಲದಲ್ಲಿ ಇಡೀ ಭರತ ಖಂಡದಲ್ಲಿ ಯಾವ ಸಂಸ್ಥಾನವೂ ಕಾಣದ ಅಭಿವೃದ್ದಿಯನ್ನು ಮೈಸೂರು ರಾಜ್ಯವು ಕಂಡುದರಿಂದ, ಮೈಸೂರು ಸಂಸ್ಥಾನಕ್ಕೆ 'ಮಾದರಿ ಮೈಸೂರು' ...